No menu items!
18.2 C
Munich
Sunday, May 24, 2026

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ

Must read

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ

ಬೆಂಗಳೂರು:- ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ.

ಧರ್ಮಸ್ಥಳ ಎಂಬ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಈ ಸರ್ಕಾರ ಮಾಡಿದೆ. ಎಸ್‌ಐಟಿಯನ್ನ ತರಾತುರಿಯಲ್ಲಿ ಈ ಸರ್ಕಾರ ಮಾಡಿತು. ಎಸ್‌ಐಟಿ ತನಿಖೆ ಮಾಡಿದ್ರು. ಇವರಿಗೆ ಏನು ಸಿಕ್ತು? ಏನು ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಡಿಕೆ ಶಿವಕುಮಾರ್ ಅವರು ಸದನದಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಂದು ಹೇಳಿದ್ದರು. ಆದರೆ ಷಡ್ಯಂತ್ರ ಮಾಡಿದವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಧಾರ್ಮಿಕ ಕ್ಷೇತ್ರಕ್ಕೆ ಅಪಮಾನ ಮಾಡೋ ಕೆಲಸ ಮಾತ್ರ ಈ ಸರ್ಕಾರ ಮಾಡಿದೆ ಎಂದು ಹರಿಹಾಯ್ದರು.

- Advertisement -spot_img

More articles

- Advertisement -spot_img

Latest article