ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

Date:

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಇಂದಿನಿಂದ (ಸೆಪ್ಟೆಂಬರ್ 29) ಭಾರೀ ಮಳೆ, ಬಲವಾದ ಗಾಳಿಯ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಹಾಗೂ ಗಾಳಿಯ ಅಬ್ಬರ ಮುಂದುವರಿಯಲಿದ್ದು, ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದೆ. ಈ ಅವಧಿಯಲ್ಲಿ ಚದುರಿದ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಮೋಡ ಕವಿದ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ಕರ್ನಾಟಕದ ಉತ್ತರ ಒಳನಾಡು ಭಾಗಗಳಲ್ಲಿ ಇಂದು (ಸೆಪ್ಟೆಂಬರ್ 29) ಮತ್ತು ನಾಳೆ (ಸೆಪ್ಟೆಂಬರ್ 30) ಗುಡುಗು ಸಹಿತ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ 12 ರಿಂದ 20 ಮಿಮೀ ಮಳೆಯಾಗಬಹುದೆಂದು IMD ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡು ಭಾಗಗಳಲ್ಲಿ ಇಂದು ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ 3 ರಿಂದ 6 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಈ ಭಾಗದಲ್ಲಿ ಚದುರಿದ ಮಳೆ ಮುಂದುವರಿಯಲಿದೆ.

Share post:

Subscribe

spot_imgspot_img

Popular

More like this
Related

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..?

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..? ದಸರಾ,...

ನವರಾತ್ರಿ ಎಂಟನೇ ದಿನ – ಮಹಾಗೌರಿ !

ನವರಾತ್ರಿ ಎಂಟನೇ ದಿನ – ಮಹಾಗೌರಿ ! ದೇವಿಯ ಹಿನ್ನಲೆ ನವರಾತ್ರಿಯ ಎಂಟನೇ ದಿನ...

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...