ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?
ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾರೂ ಪಕ್ಷದ ಚೌಕಟ್ಟು ಮೀರಬಾರದು. ಆದರೆ ಕೆಲವರು ಅದನ್ನು ಮೀರಿ ಮಾತನಾಡಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಮತಗಳ್ಳತನದ ಆರೋಪಗಳ ಬಗ್ಗೆ ಮಾತನಾಡಿದ ಸುರ್ಜೇವಾಲ, ಮಹದೇವಪುರ ಮತ್ತು ಆಳಂದ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿಲ್ಲ, ಬೇರೆ ಬೇರೆ ಕ್ಷೇತ್ರಗಳಲ್ಲಿಯೂ ನಡೆದಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ನಡೆದ ಮತಗಳ್ಳತನದ ದಾಖಲೆಗಳನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ ಎಂದು ಅವರು ನೆನಪಿಸಿದರು. ಬಿಜೆಪಿ ಸಂವಿಧಾನ ನೀಡಿದ ಹಕ್ಕನ್ನು ಕಿತ್ತುಕೊಳ್ಳುತ್ತಿದೆ. ಇದಕ್ಕಾಗಿ ಕಾಂಗ್ರೆಸ್ ‘ವೋಟ್ ಚೋರಿ’ ಅಭಿಯಾನ ನಡೆಸುತ್ತಿದೆ,” ಎಂದು ಸುರ್ಜೇವಾಲ ಹೇಳಿದರು.