No menu items!
18.2 C
Munich
Sunday, May 24, 2026

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

Must read

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬೆಂಗಳೂರು: ಬಿಗ್ ಬಾಸ್ ಮನೆಯನ್ನು ಸೀಲ್ ಮಾಡಿದ ಕ್ರಮದ ಬೆನ್ನಲ್ಲೇ ಜಾಲಿವುಡ್ ಸ್ಟುಡಿಯೋ (ವೇಲ್ಸ್ ಸ್ಟುಡಿಯೋ ಅಂಡ್ ಎಂಟರ್‌ಟೈನ್‌ಮೆಂಟ್ ಪ್ರೈ. ಲಿಮಿಟೆಡ್) ಹೈಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ನ್ಯಾ. ಸೂರಜ್ ಗೋವಿಂದರಾಜ್ ಅವರ ಪೀಠದಲ್ಲಿ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ.

ಅರ್ಜಿ ಮೂಲಕ ಸ್ಟುಡಿಯೋ ಪರ ವಕೀಲರು, “ಬಿಗ್ ಬಾಸ್ ಕಾರ್ಯಕ್ರಮ ಆರಂಭವಾಗುವ ವೇಳೆಯಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ನಮ್ಮ ಅಹವಾಲು ಆಲಿಸದೇ ತರಾತುರಿಯಲ್ಲಿ ಆದೇಶ ಹೊರಡಿಸಿದ್ದಾರೆ. ಈ ಶೋನಲ್ಲಿ ಸುಮಾರು 2 ಸಾವಿರ ಮಂದಿ ನೇರ ಅಥವಾ ಪರೋಕ್ಷವಾಗಿ ತೊಡಗಿಸಿಕೊಂಡಿದ್ದಾರೆ.

ವ್ಯವಹಾರಕ್ಕೆ ಹಾನಿ ಮಾಡುವ ಉದ್ದೇಶದಿಂದಲೇ ಈ ಆದೇಶ ಹೊರಡಿಸಲಾಗಿದೆ. ಹೀಗಾಗಿ ಮಂಡಳಿಯ ಆದೇಶಕ್ಕೆ ಹಾಗೂ ಇತರ ಯಾವುದೇ ಸಂಸ್ಥೆಗಳ ನಿರ್ಬಂಧಗಳಿಗೆ ತಡೆ ನೀಡಬೇಕು” ಎಂದು ಮನವಿ ಮಾಡಿದ್ದಾರೆ.ಇದೇ ವೇಳೆ ಬಿಗ್ ಬಾಸ್ ತಂಡದಿಂದ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ತಿಳಿದುಬಂದಿದೆ. ಬಿಗ್ ಬಾಸ್ ಕಾರ್ಯಕ್ರಮ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿರುವುದರಿಂದ, ವೇಲ್ಸ್ ಸ್ಟುಡಿಯೋ ಈ ಪ್ರಕರಣದಲ್ಲಿ ಹೈಕೋರ್ಟ್ ಮೊರೆ ಹೋಗಿದೆ.

- Advertisement -spot_img

More articles

- Advertisement -spot_img

Latest article