No menu items!
2.7 C
Munich
Friday, May 1, 2026

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

Must read

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಭಾರಿ ಮಳೆಯ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬುಧವಾರವೂ ನಗರಾದ್ಯಂತ ಮಳೆಯಾಗಿದ್ದು, ಅಕ್ಟೋಬರ್‌ 15ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಜಾರಿಯಲ್ಲಿದೆ.

ಬುಧವಾರ ಎಂಎಂ ಹಿಲ್ಸ್‌ ಮತ್ತು ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ 32.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಧಾರವಾಡದಲ್ಲಿ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಯಿತು.

ಎಚ್‌ಎಎಲ್‌ನಲ್ಲಿ ಗರಿಷ್ಠ 29.5 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21.1 ಡಿಗ್ರಿ ಸೆಲ್ಸಿಯಸ್, ಬೆಂಗಳೂರಿನಲ್ಲಿ 29.2 ಮತ್ತು 21.6 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ 29.8 ಮತ್ತು 21.0 ಡಿಗ್ರಿ ಸೆಲ್ಸಿಯಸ್, ಜಿಕೆವಿಕೆಯಲ್ಲಿ 28.8 ಮತ್ತು 18.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಭಾಗಗಳಲ್ಲಿ ಹೊನ್ನಾವರದಲ್ಲಿ ಗರಿಷ್ಠ 30.6 ಮತ್ತು ಕನಿಷ್ಠ 24.1 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 32.5 ಮತ್ತು 24.8 ಡಿಗ್ರಿ ಸೆಲ್ಸಿಯಸ್, ಮಂಗಳೂರು ವಿಮಾನ ನಿಲ್ದಾಣದಲ್ಲಿ 30.0 ಮತ್ತು 23.4 ಡಿಗ್ರಿ ಸೆಲ್ಸಿಯಸ್ ಹಾಗೂ ಶಕ್ತಿನಗರದಲ್ಲಿ 30.9 ಮತ್ತು 22.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article