Bangalore: ಬಾರ್ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!
ಬೆಂಗಳೂರು: ಬಾರ್‌ಗೆ ಕುಡಿಯಲು ತೆರಳಿದ್ದ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದಲ್ಲಿನ ಆರ್.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ಮೇಘರಾಜ್ (31) ಎಂದು ಗುರುತಿಸಲಾಗಿದೆ.
ನಿನ್ನೆ ತಡರಾತ್ರಿ ಮೇಘರಾಜ್ ತನ್ನ ಸ್ನೇಹಿತರೊಂದಿಗೆ 1522 ಬಾರ್‌ನಲ್ಲಿ ಮದ್ಯಪಾನ ಮಾಡುತ್ತಿದ್ದ. ಬಳಿಕ ಆತ ಬಾತ್‌ರೂಮ್‌ಗೆ ತೆರಳಿದ್ದರೂ, ಸಾಕಷ್ಟು ಹೊತ್ತಾದರೂ ಹೊರಬರಲಿಲ್ಲ. ಇದರಿಂದ ಅನುಮಾನಗೊಂಡ ಸ್ನೇಹಿತರು ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಇಲ್ಲದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ನೋಡಿದಾಗ ಮೇಘರಾಜ್ ಶವವಾಗು ಪತ್ತೆಯಾಗಿದ್ದ.
ತಕ್ಷಣವೇ ಸ್ಥಳಕ್ಕೆ ಆರ್.ಆರ್. ನಗರ ಪೊಲೀಸರು ಮತ್ತು ಸೋಕೋ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ವರದಿಯ ಬಳಿಕ ಮಾತ್ರ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರ್.ಆರ್. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.