ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

Date:

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮುಂಜಾನೆ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಅವರು ಪ್ರತಿಕ್ರಿಯಿಸಿದರು.
ಮಾರತ್ ಹಳ್ಳಿ ಬಳಿ ಮಳೆಯಲ್ಲೇ ಡಾಂಬರು ಹಾಕುತ್ತಿದ್ದ ಬಗ್ಗೆ ಕೇಳಿದಾಗ, ನಗರದಾದ್ಯಂತ ರಾತ್ರಿಯೆಲ್ಲಾ ಜೋರಾಗಿ ಮಳೆ ಸುರಿದಿದೆ. ನಮ್ಮ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಎಲ್ಲಿಯೂ ಅವಘಡಗಳು ನಡೆದ ಸುದ್ದಿಗಳು ವರದಿಯಾಗಿಲ್ಲ.
ಒಂದಷ್ಟು ಕಡೆ ಮಾತ್ರ ನೀರಿನ ಹರಿವಿಗೆ ಅಡಚಣೆ ಉಂಟಾಗಿದೆ ಎಂದರು. ಒಂದು ವಾರಗಳ ಹಿಂದೆ ಮುಚ್ಚಿದ್ದ ರಸ್ತೆಗುಂಡಿಗಳು ಮಳೆಗೆ ಮತ್ತೆ ಹಾಳಾಗಿರುವ ಬಗ್ಗೆ ಕೇಳಿದಾಗ, “ಮಳೆ ಬಂದಾಗ ಈ ರೀತಿ ತೊಂದರೆಯಾಗುತ್ತದೆ, ಸಮಸ್ಯೆ ಬಗೆ ಹರಿಸಲಾಗುವುದು” ಎಂದರು.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...