ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ
ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ ಯಡವಟ್ಟಿನಿಂದ ಸರಣಿ ಅಪಘಾತಗಳು ಸಂಭವಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬರ್ತಿದ್ದ ಬಿಎಂಟಿಸಿ ಬಸ್, ಒಟ್ಟು 9 ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಚಾಲಕನಿಗೆ ಪಿಡ್ಸ್ ಬಂದು ಅಪಘಾತ ಸಂಭವಿಸಿರಬಹುದೆಂದು ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ. ಗಾಯಾಳುಗಳ ಸ್ಥಿತಿ ಹಾಗೂ ಚಾಲಕನ ಆರೋಗ್ಯ ಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ ಎನ್ನಲಾಗಿದೆ.