ಖ್ಯಾತ ರಂಗ ಕಲಾವಿದ, ನಟ, ರಂಗನಿರ್ದೇಶಕ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜು ತಾಳಿಕೋಟಿ ಗ್ರಾಮೀಣ ಸೊಗಡಿನ ಪ್ರತಿಭೆ ಅಂದರೆ ತಪ್ಪಾಗಲಾರದು. ಕಲಿಯುಗದ ಕುಡುಕ ಸೇರಿದಂತೆ ಸಾಕಷ್ಟು ನಾಟಕಗಳು ಹಾಗೂ ಅವರ ನಟನೆಯಿಂದಲೆ ಖ್ಯಾತಿ ಗಳಿಸಿದ್ದರು.

ಶೂಟಿಂಗ್ ನ ವೇಳೆ ಹುಸಿದು ಬಿದ್ದಿದ್ದಾರೆ. ಅವರನ್ನ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.
ಧಾರವಾಡ ರಂಗಾಯಣದ ನಿರ್ದೇಶಕರಾಗಿದ್ದ ಅವರು, ರಂಗಭೂಮಿ ಹಾಗೂ ಸಿನಿಮಾ ಲೋಕದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದರು.
ಮಾಹಿತಿಯ ಪ್ರಕಾರ, ಶನಿವಾರ ಮಧ್ಯರಾತ್ರಿ (ಅಕ್ಟೋಬರ್ 12) ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾದರು.
ರಾಜು ತಾಳಿಕೋಟೆ ಅವರು ಮುಂದಿನ ಮೂರು ದಿನಗಳ ಕಾಲ ನಡೆಯಲಿದ್ದ ಚಲನಚಿತ್ರದ ಶೂಟಿಂಗ್‌ನಲ್ಲಿ ಭಾಗವಹಿಸಲು ತಯಾರಾಗಿದ್ದರು. ಅವರ ಅಕಾಲಿಕ ನಿಧನ ಚಿತ್ರತಂಡಕ್ಕೆ ಹಾಗೂ ಅಭಿಮಾನಿಗಳಿಗೆ ದೊಡ್ಡ ಆಘಾತವಾಗಿದೆ.
ಹಾಸ್ಯ ನಟನಾಗಿ ಮತ್ತು ರಂಗಕರ್ಮಿಯಾಗಿ ಗುರುತಿಸಿಕೊಂಡಿದ್ದ ರಾಜು ತಾಳಿಕೋಟೆ ಅವರು ‘ಮನಸಾರೆ’, ‘ಪಂಚರಂಗಿ’, ‘ಲೈಫು ಇಷ್ಟೇನೇ’, ‘ರಾಜಧಾನಿ’, ‘ಅಲೆಮಾರಿ’, ‘ಮೈನಾ’, ‘ಟೋಪಿವಾಲಾ’ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು.