ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು: ಸಚಿವ ಮಧು ಬಂಗಾರಪ್ಪ

Date:

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಇನ್ನುಮುಂದೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಕೇವಲ ಶೇ.33 ಅಂಕ ಸಾಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ  ಘೋಷಿಸಿದ್ದಾರೆ. 2025-26ನೇ ಶೈಕ್ಷಣಿಕ ವರ್ಷದ ಪರೀಕ್ಷೆಗಳಿಂದ ಈ ನಿಯಮ ಜಾರಿಗೆ ಬರುತ್ತದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ನಿರ್ಧಾರವು ವಿದ್ಯಾರ್ಥಿಗಳ ಉತ್ತೀರ್ಣತಾ ಪ್ರಮಾಣ ಹೆಚ್ಚಿಸುವ ಹಾಗೂ ಸಿಬಿಎಸ್‌ಇ ಹಾಗೂ ನೆರೆ ರಾಜ್ಯಗಳ ಏಕರೂಪ ಶಿಕ್ಷಣ ನೀತಿ ಅಳವಡಿಸುವ ಉದ್ದೇಶದಿಂದ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಪಾಸಿಂಗ್ ಮಾರ್ಕ್‌ ಕಡಿತ ಕುರಿತಂತೆ ಶಾಲಾ ಪರೀಕ್ಷಾ ಮಂಡಳಿ ಕರಡು ಅಧಿಸೂಚನೆ ಬಿಡುಗಡೆ ಮಾಡಿ ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿತ್ತು. ಇದರ ಮೇಲೆ ಶೇ.33ರಷ್ಟು ಪಾಸಿಂಗ್ ಮಾರ್ಕ್ ಪರವಾಗಿ 701 ಪತ್ರಗಳು, ಶೇ.35ರಷ್ಟು ಪರವಾಗಿ ಕೇವಲ 8 ಪತ್ರಗಳು ಬಂದಿದ್ದು, ಬಹುಮತದ ಆಧಾರದ ಮೇಲೆ ಶೇ.33 ರಷ್ಟು ಅಂಕಗಳೇ ಪಾಸಿಂಗ್ ಮಾರ್ಕ್ ಆಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಈ ವೇಳೆ ರಾಜ್ಯದ ಪರೀಕ್ಷಾ ವ್ಯವಸ್ಥೆಯಲ್ಲಿ ತರಲಾಗಿರುವ ಪೈಪೋಟಿಯ ಸುಧಾರಣೆಗಳ ಬಗ್ಗೆ ಸಹ ಪ್ರಸ್ತಾಪಿಸಿದರು. “ಪರೀಕ್ಷೆಗಳ ಅವ್ಯವಸ್ಥೆ ತಪ್ಪಿಸಲು ವೆಬ್ ಕಾಸ್ಟಿಂಗ್ ತಂತ್ರಜ್ಞಾನದ ಮೂಲಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ವರ್ಷ ಮೂವರು ಬೋರ್ಡ್ ಪರೀಕ್ಷೆಗಳ ಫಲಿತಾಂಶ ಉತ್ತಮವಾಗಿದ್ದು, ಎಸ್‌ಎಸ್‌ಎಲ್‌ಸಿಯಲ್ಲಿ ಶೇ.79 ಪಾಸಿಂಗ್ ಪ್ರಮಾಣ ದಾಖಲಾಗಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...