No menu items!
9.2 C
Munich
Friday, May 1, 2026

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

Must read

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.
ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು. ಗೊತ್ತಿದ್ದೂ ಗೊತ್ತಿದ್ದೂ ಆಹಾರ ವೇಸ್ಟ್ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದರು. ಅನ್ನ ವೇಸ್ಟ್ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌ ಎಂದರು.

- Advertisement -spot_img

More articles

- Advertisement -spot_img

Latest article