RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

Date:

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನುಮುಂದೆ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಸೇರಿದಂತೆ ಯಾವುದೇ ಖಾಸಗಿ ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸದಂತೆ ನಿಷೇಧ ಹೇರಿದೆ. ಈ ಮೂಲಕ RSS ಹೆಸರು ಉಲ್ಲೇಖ ಮಾಡದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.

2013 ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ, ತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಧಾರದಂತೆ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ ನಿಯಮ ತರಲು ಮುಂದಾಗಿದ್ದು,

ತನ್ನ ತೀರ್ಮಾನದಲ್ಲಿ ಎಲ್ಲಿಯೂ ಆರ್‌ಎಸ್‌ಎಸ್‌ ಪದ ಬಳಕೆ ಮಾಡದೇ ಸರ್ಕಾರ ಖಾಸಗಿ ಸಂಸ್ಥೆಗಳು ಎಂದು ಉಲ್ಲೇಖಿಸಿ ಜಾಣ್ಮೆ ನಡೆ ಅನುಸರಿಸಿದೆ. ಈ ನಿಯಮ ಜಾರಿಯಾದರೆ ಆರ್‌ಎಸ್‌ಎಸ್‌ ಮಾತ್ರವಲ್ಲ ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ ಮಾಡುವುದಾದರೂ ಅನುಮತಿ ಪಡೆಯಬೇಕಾಗುತ್ತದೆ.

Share post:

Subscribe

spot_imgspot_img

Popular

More like this
Related

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...