No menu items!
9.2 C
Munich
Friday, May 1, 2026

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Must read

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚು ಇರಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಸಾಧಾರಣ ಅಥವಾ ಸಣ್ಣ ಪ್ರಮಾಣದ ಮಳೆಯ ನಿರೀಕ್ಷೆ ಇದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರುವ ನಿರೀಕ್ಷೆಯಿದೆ. ಹವಾಮಾನ ವೈಪರಿತ್ಯದ ಹಿನ್ನೆಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ತುಸು ಮಳೆಯಾಗಬಹುದು.

- Advertisement -spot_img

More articles

- Advertisement -spot_img

Latest article