ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ
ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿಯಲ್ಲಿ ಮೂರು ಕೆ.ಎಸ್.ಆರ್.ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದೆ. ಮೊದಲು ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಬಸ್ಸಿಗೆ ಇನ್ನೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ, ಅಪಘಾತ ಗಂಭೀರವಾಗಿದೆ. ಯಗೊಂಡವರನ್ನು ಮಳವಳ್ಳಿ ಮತ್ತು ಮೈಸೂರು ನಗರ ಆಸ್ಪತ್ರೆಗೆ ದಾಖಲಿಸಿ ತಕ್ಷಣ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂದ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.