No menu items!
13.3 C
Munich
Thursday, April 30, 2026

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್

Must read

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ತುಮಕೂರು, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಮೂಲಕ ಇಡೀ ಕರ್ನಾಟಕದಾದ್ಯಂತ ಮಳೆಯ ಆರ್ಭಟವಾಗಲಿದೆ.

ಕರಾವಳಿ ಪ್ರದೇಶದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ಇದೆ. ಹವಾಮಾನ ವೈಪರಿತ್ಯದ ಹಿನ್ನಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಸಹ ಸಾಧಾರಣ ಮಳೆಯ ಸಾಧ್ಯತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯ ಸಂಭವವಿದೆ.

ಬೆಂಗಳೂರು ನಗರದಲ್ಲಿಯೂ ಇಂದು ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯ ನಿರೀಕ್ಷೆಯಿದೆ. ಗಾಳಿಯ ವೇಗ ಸುಮಾರು ಗಂಟೆಗೆ 13-15 ಕಿ.ಮೀ ಇರಲಿದ್ದು, ನಗರದಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -spot_img

More articles

- Advertisement -spot_img

Latest article