ಮನಬಂದಂತೆ ವಿದ್ಯಾರ್ಥಿಗೆ ಥಳಿಸಿದ ಕೇಸ್:‌ ಆರೋಪಿ ಶಿಕ್ಷಕ ಅರೆಸ್ಟ್.!‌

Date:

ಮನಬಂದಂತೆ ವಿದ್ಯಾರ್ಥಿಗೆ ಥಳಿಸಿದ ಕೇಸ್:‌ ಆರೋಪಿ ಶಿಕ್ಷಕ ಅರೆಸ್ಟ್.!‌

ಚಿತ್ರದುರ್ಗ: 9 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಅಜ್ಜಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿ ಯದ್ವಾತದ್ವ ಹೊಡೆದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ನಡೆದಿತ್ತು. ಈ ಸಂಬಂಧ  ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಬಂಧಿಸಿದ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

ವಿಡಿಯೋ ವೈರಲ್‌ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್‌ನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದರು. ತಡರಾತ್ರಿ ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ನ್ಯಾಯಾಧೀಶರು 2 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ವೀರೇಶ್‌ನನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಿದ್ದಾರೆ. ಶಿಕ್ಷಕ ವೀರೇಶ್ ಹಿರೇಮಠ್‌ನನ್ನು ಅಮಾನತುಗೊಳಿಸಿ ಚಿತ್ರದುರ್ಗ ಡಿಸಿ ವೆಂಕಟೇಶ್ ಆದೇಶ ಪ್ರಕಟಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...