No menu items!
18 C
Munich
Thursday, June 18, 2026

ಪ್ರಿಯಾಂಕ್ ಖರ್ಗೆ ಟ್ವೀಟ್‌ಗೆ ಅನಂತ್ ಕುಮಾರ್ ಪುತ್ರಿ ಐಶ್ವರ್ಯಾ ಟಕ್ಕರ್

Must read

ಪ್ರಿಯಾಂಕ್ ಖರ್ಗೆ ಟ್ವೀಟ್‌ಗೆ ಅನಂತ್ ಕುಮಾರ್ ಪುತ್ರಿ ಐಶ್ವರ್ಯಾ ಟಕ್ಕರ್

ಬೆಂಗಳೂರು: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದಿವಂಗತ ಅನಂತ್ ಕುಮಾರ್ ಪುತ್ರಿ ಐಶ್ವರ್ಯಾ ಕಿಡಿಕಾರಿದ್ದಾರೆ.

ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ನಿಂದ ಹಣ ಹೋಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟಾಗಿ ಪ್ರಿಯಾಂಕ್ ಖರ್ಗೆ, ಯಡಿಯೂರಪ್ಪ–ಅನಂತ್ ಕುಮಾರ್ ಸಂಭಾಷಣೆಯ ವಿಡಿಯೋ ಹಂಚಿಕೊಂಡಿದ್ದರು.

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಐಶ್ವರ್ಯಾ, “ಅಂದು ಇಬ್ಬರು ನಾಯಕರು ನಿಮ್ಮ ಪಕ್ಷದ ಡೈರಿಯ ಕಿಕ್‌ಬ್ಯಾಕ್ ವಿಚಾರದ ಬಗ್ಗೆ ಮಾತನಾಡಿದ್ದರು. ಅದು ಕಾಂಗ್ರೆಸ್ ಹೈಕಮಾಂಡ್‌ಗೆ ನೀಡಿದ್ದ ಪಪ್ಪದ ಬಗ್ಗೆ ಇರುವ ಸಂಭಾಷಣೆ” ಎಂದು ಬರೆದಿದ್ದಾರೆ.

ಆರ್‌ಎಸ್‌ಎಸ್‌ಗೆ ಕಳಂಕ ಹಚ್ಚುವ ಪ್ರಯತ್ನ ವಿಫಲವಾಗಿದೆ, ಅನಂತ್ ಕುಮಾರ್ ಕುರಿತು ನಿಮ್ಮ ಪಕ್ಷದವರೇ ಗೌರವ ಇಟ್ಟುಕೊಂಡಿದ್ದಾರೆ ಎಂದು ಐಶ್ವರ್ಯಾ ಖಾರವಾಗಿ ಟೀಕಿಸಿದ್ದಾರೆ.

- Advertisement -spot_img

More articles

- Advertisement -spot_img

Latest article