ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಇಂಡಿಗೋ ವಿಮಾನಗಳು ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದ್ದು ಇದೀಗ ಕೋಲ್ಕತ್ತಾದಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಸಂಖ್ಯೆ 6E 6961 ಗುರುತಿಸಲಾದ ತಾಂತ್ರಿಕ ಸಮಸ್ಯೆಯ ನಂತರ ವಾರಣಾಸಿಯಲ್ಲಿ ಮುನ್ನೆಚ್ಚರಿಕೆಯಿಂದ ತುರ್ತು ಭೂಸ್ಪರ್ಷ ಮಾಡಲಾಗಿದೆ.
ವಿಮಾನದಲ್ಲಿ ಇಂಧನ ಸೋರಿಕೆಯ ಶಂಕೆ ಉಂಟಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಾರಣಾಸಿಯಲ್ಲಿ ಭೂಸ್ಪರ್ಶ ಮಾಡಲಾಯಿತು. ಲ್ಯಾಂಡಿಂಗ್ ಯಶಸ್ವಿಯಾಗಿ ನಡೆದಿದ್ದು, ವಿಮಾನದಲ್ಲಿದ್ದ 166 ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿಇಳಿಸಲಾಯಿತು. ಘಟನೆಯ ನಂತರ ವಿಮಾನವನ್ನು ಸಂಪೂರ್ಣವಾಗಿ ತಪಾಸಣೆ ಮತ್ತು ದುರಸ್ತಿ ಕಾರ್ಯಗಳಿಗಾಗಿ ಸ್ಥಳಾಂತರಿಸಲಾಯಿತು.