ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ ಇಂದು ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತದಿಂದಾಗಿ ಸೈಕ್ಲೋನ್ ಉಂಟಾಗಿದ್ದು, ಇದರ ಪರಿಣಾಮವಾಗಿ ರಾಜ್ಯದ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
30 ರಿಂದ 40 ಕಿ.ಮೀ./ಗಂಟೆ ವೇಗದ ಗಾಳಿಯೊಂದಿಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಜನರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.ಮುಂದಿನ ಒಂದು ವಾರದವರೆಗೆ ಬೆಂಗಳೂರಿನ ಮೇಲೆ ಸೈಕ್ಲೋನ್‌ನ ಪ್ರಭಾವ ಮುಂದುವರಿಯಲಿದೆ. ಮುಂದಿನ ಎರಡು-ಮೂರು ದಿನಗಳಲ್ಲಿ ಈ ಪರಿಣಾಮ ತೀವ್ರಗೊಳ್ಳುವ ಸಾಧ್ಯತೆ ಇದೆ.
ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಭೀತಿ ಇರುವುದರಿಂದ ನಾಗರಿಕರು ಮುಂಜಾಗ್ರತೆ ವಹಿಸಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇಂದಿನ ಗಾಳಿಯ ಗುಣಮಟ್ಟ ಸೂಚ್ಯಂಕ (AQI) 94 ಆಗಿದ್ದು, ದಿನವಿಡೀ ಮೋಡ ಕವಿದ ವಾತಾವರಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.