ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

Date:

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್  ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಡಿಕ್ಕಿಯ ನಂತರ ನಟಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಘಟನೆಯು ಅಕ್ಟೋಬರ್ 4ರ ರಾತ್ರಿ ಸುಮಾರು 1:30ಕ್ಕೆ ಬ್ಯಾಟರಾಯನಪುರದ ಎಂ.ಎಂ. ರಸ್ತೆಯಲ್ಲಿ ಸಂಭವಿಸಿದ್ದು, ಈ ಬಗ್ಗೆ ಅಕ್ಟೋಬರ್ 7ರಂದು ಗಾಯಾಳು ಮಹಿಳೆಯ ಸಂಬಂಧಿ ಕಿರಣ್ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಿರಣ್ ನೀಡಿರುವ ದೂರಿನ ಪ್ರಕಾರ, ನಮ್ಮ ಸಂಬಂಧಿ ಅನುಷಾ ಅಸ್ವಸ್ಥರಾಗಿದ್ದರಿಂದ ಆ ರಾತ್ರಿ ಗಿರಿನಗರದ ಆಸ್ಪತ್ರೆಗೆ ತೆರಳುತ್ತಿದ್ದೆವು. ನಾನು ಬೈಕ್ ಓಡಿಸುತ್ತಿದ್ದೆ, ಅನಿತಾ ಹಿಂದೆ ಕುಳಿತಿದ್ದರು. ಈ ವೇಳೆ ರಸ್ತೆಯ ಬದಿಯಲ್ಲಿ ನಾಯಿ ಬೊಗಳುತ್ತಿದ್ದುದರಿಂದ ಸ್ವಲ್ಪ ಬಲಕ್ಕೆ ಬೈಕ್ ತೆಗೆದುಕೊಂಡೆ. ಅಷ್ಟರಲ್ಲಿ ಕ್ರಾಸ್‌ನಿಂದ ಬಂದ ದಿವ್ಯಾ ಸುರೇಶ್ ಅವರ ಕಾರು ಬಂದು ಅನಿತಾ ಅವರ ಕಾಲಿಗೆ ಡಿಕ್ಕಿಯಾಯಿತು ಎಂದು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಬಿದ್ದು ಗಾಯಗೊಂಡಿದ್ದಾರೆ. ಅನಿತಾ ಅವರ ಕಾಲಿನ ಮಂಡಿ ಚಿಪ್ಪು ಮುರಿದಿದ್ದು, ಶಸ್ತ್ರಚಿಕಿತ್ಸೆಗೆ ಸುಮಾರು ₹2 ಲಕ್ಷ ವೆಚ್ಚವಾಗಿದೆ ಎಂದು ಕಿರಣ್ ತಿಳಿಸಿದ್ದಾರೆ.ಅಪಘಾತದ ನಂತರ ನಟಿ ದಿವ್ಯಾ ಸುರೇಶ್ ಕಾರು ನಿಲ್ಲಿಸದೇ ಅಲ್ಲಿಂದ ತೆರಳಿದ್ದು, ಗಾಯಾಳುಗಳ ನೆರವಿಗೆ ಮುಂದೆ ಬಂದಿಲ್ಲ ಎಂಬುದು ದೂರಿನ ಅಂಶವಾಗಿದೆ. “ಇಂದುವರೆಗೂ ನಟಿ ದಿವ್ಯಾ ಸುರೇಶ್ ನಮ್ಮನ್ನು ಸಂಪರ್ಕಿಸಿ ಪರಿಹಾರ ನೀಡಿಲ್ಲ. ನಾವು ಸಾಮಾನ್ಯ ಜನ. ನಾನು ಕ್ಯಾಬ್‌ ಓಡಿಸಿ ಜೀವನ ನಡೆಸುತ್ತಿದ್ದೇನೆ. ಸರ್ಕಾರ ಮತ್ತು ಪೊಲೀಸರು ನಮಗೆ ನ್ಯಾಯ ಮಾಡಲಿ ಎಂದು ಕಿರಣ್ ಮನವಿ ಮಾಡಿದ್ದಾರೆ.

ಬ್ಯಾಟರಾಯನಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ದಿವ್ಯಾ ಸುರೇಶ್ ಅವರ ಕಾರು ಪತ್ತೆ ಹಚ್ಚಿ ಸೀಜ್ ಮಾಡಲಾಗಿದೆ. ನಟಿಯ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿದಿದೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...