ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

Date:

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಬೆಂಗಳೂರು: ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮ ಬೆಂಬಲಿಕ್ಕಿದ್ದೇವೆ, ನೀವು ಮುಂದುವರೆಯಿರಿ”, “ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ…”

ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿ, ದೂರದೃಷ್ಟಿ ಯೋಜನೆಗಳಿಗೆ ಸಾರ್ವಜನಿಕರು ಮುಕ್ತ ಕಂಠದಿಂದ ಹೊಗಳಿದ ಪರಿ ಇದು.

ಬೆಂಗಳೂರು ನಡಿಗೆ ಅಂಗವಾಗಿ ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದದ ವೇಳೆ ಹಲವಾರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು.

ನಾಗರಿಕರೊಬ್ಬರು, “ಸಾರ್, ನೀವು ಕೈಗೆತ್ತಿಕೊಂಡಿರುವ ಟನಲ್ ರಸ್ತೆ ಯೋಜನೆ ಚೆನ್ನಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ರಸ್ತೆಗಳು ಬೇಕು. ಟನಲ್ ಯೋಜನೆ ಸಾಕಾರಗೊಳಿಸಿ. ಇದೊಂದು ಅತ್ಯುತ್ತಮ ಯೋಜನೆ” ಎಂದು ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್ ‌ಅವರು, “ನಾನು ಸಹ ಸಾಕಷ್ಟು ‌ಆಲೋಚನೆ ಮಾಡಿದೆ. ರಸ್ತೆ ಅಗಲೀಕರಣಕ್ಕಾಗಿ ಮನೆಗಳನ್ನು ಒಡೆಯಲು ಆಗುವುದಿಲ್ಲ. ಇದಕ್ಕೆ ದುಪ್ಪಟ್ಟು ಪರಿಹಾರ ನೀಡಬೇಕು. ಅದರ‌ ಬದಲು ಸುರಂಗ ಮಾರ್ಗ ರಸ್ತೆಯೇ ಸರಿ ಎಂದು ಯೋಜನೆಗೆ ಮುಂದಾಗಿದ್ದೇನೆ” ಎಂದರು.

Share post:

Subscribe

spot_imgspot_img

Popular

More like this
Related

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...