No menu items!
19.6 C
Munich
Tuesday, April 28, 2026

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Must read

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಚುರುಕು ಮುಂದುವರಿದಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಭಾರಿ ಮಳೆಯೂ ಸಾಧ್ಯವೆಂದು ಇಲಾಖೆಯ ಮುನ್ಸೂಚನೆ.

ದಕ್ಷಿಣ ಭಾಗದ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಹ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಇಂದು ಶೇ.60 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -spot_img

More articles

- Advertisement -spot_img

Latest article