World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?
2025 ರ ಮಹಿಳಾ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಇಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಇದು 13 ನೇ ಏಕದಿನ ವಿಶ್ವಕಪ್ ಆಗಿದ್ದು 1973 ರಲ್ಲಿ ಪ್ರಾರಂಭವಾದ ಈ ಟೂರ್ನಿಯ ಮೊದಲ ಆವೃತ್ತಿಯನ್ನು ಇಂಗ್ಲೆಂಡ್ ಗೆದ್ದುಕೊಂಡಿತ್ತು.
ಉಳಿದಂತೆ ಆಸ್ಟ್ರೇಲಿಯಾ ಅತ್ಯಧಿಕ 7 ಬಾರಿ ಪ್ರಶಸ್ತಿ ಗೆದ್ದಿದ್ದರೆ, ಇಂಗ್ಲೆಂಡ್ 4 ಬಾರಿ ಮತ್ತು ನ್ಯೂಜಿಲೆಂಡ್ ಒಮ್ಮೆ ಈ ಟ್ರೋಫಿಯನ್ನು ಎತ್ತಿಹಿಡಿದಿದೆ. ಆದ್ದರಿಂದ, ಈ ಆವೃತ್ತಿಯಲ್ಲಿ ಹೊಸ ವಿಜೇತರ ಕೈಗೆ ವಿಶ್ವಕಪ್ ಟ್ರೋಫಿ ಸಿಗಲಿದೆ. ಮಹಿಳಾ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯವು ಇಂದು ರಂದು ನವಿ ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯಲಿದೆ.
ಈಗ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿವೆ. ಎರಡು ತಂಡಗಳು ಕೂಡ ಇದುವರೆಗೂ ಮಹಿಳಾ ವಿಶ್ವಕಪ್ ಗೆದ್ದಿಲ್ಲ; ಆದ್ದರಿಂದ ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಮೊದಲ ಬಾರಿಗೆ ಚೊಚ್ಚಲ ಟ್ರೋಫಿ ಸಿಗಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನವೆಂಬರ್ 2 ರಂದು ನಡೆಯಲಿದೆ.ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಮಧ್ಯಾಹ್ನ 2:30 ಕ್ಕೆ ನಡೆಯಲಿದೆ.ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿದ ಚಾನೆಲ್ಗಳಲ್ಲಿ ವೀಕ್ಷಿಸಬಹುದು.






