ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

Date:

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು ಎಂದರು.
ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿವೆ. ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿಮಾಹೆ 2000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ.
ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು,ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆ ಎಂದರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...

World Cup 2025: ವಿಶ್ವ ಗೆದ್ದ ಭಾರತದ ವನಿತಾ ಪಡೆ..! ಇತಿಹಾಸ ಬರೆದ ಸಿಂಹಿಣಿಯರು

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ 2025ರ...