ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

Date:

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಒಣ ಹವೆಯಿರಲಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಲಘು ಮಳೆಯ ಸಾಧ್ಯತೆಯಿದೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾವೇರಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ. ಗಾಳಿಯ ವೇಗ ಗಂಟೆಗೆ 11 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...