ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

Date:

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹರಿಯಾಣದಲ್ಲಿ ಮತ ಕಳ್ಳತನ ನಡೆದಿರುವುದಾಗಿ ಆರೋಪಿಸಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಒಬ್ಬ ವ್ಯಕ್ತಿ ಹಲವಾರು ಬಾರಿ ಮತದಾನ ಮಾಡಿರುವ ಘಟನೆಗಳ ದಾಖಲೆಗಳು ಬಂದಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಬ್ರೆಜಿಲ್ ಮಾಡೆಲ್ ಫೋಟೊ ಬಳಸಿ 10 ಬೂತ್​ಗಳಲ್ಲಿ  22 ವಿಭಿನ್ನ ಹೆಸರುಗಳಲ್ಲಿ ಮತದಾನ ನಡೆಸಲಾಗಿದೆ.

ಹೌದು ಕಾಂಗ್ರೆಸ್‌ ಕೇವಲ 22,779 ಮತಗಳಿಂದ ಸೋತಿದೆ. ಆದ್ರೆ ಒಟ್ಟು 1.18 ಲಕ್ಷ ಮತಗಳು ವ್ಯತ್ಯಾಸ ಇದೆ. ಅಷ್ಟೇ ಅಲ್ಲ ಹರಿಯಾಣದಲ್ಲಿ 25 ಲಕ್ಷ ಮತಗಳ ಕಳ್ಳತನ ನಡೆದಿದೆ. ಶೇ.12.5 ರಷ್ಟು ನಕಲಿ ಮತಗಳು, 93,000 ವಿಳಾಸಗಳು ಅಮಾನ್ಯವಾದವುಗಳು ಎಂದು ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ.

ಒಬ್ಬ ಮಹಿಳೆ ಸೀಮಾ, ಸ್ವೀಟಿ, ಸರಸ್ವತಿ ಸೇರಿದಂತೆ ಹಲವು ಹೆಸರಿನಲ್ಲಿ 22 ಬಾರಿ ಮತ ಚಲಾಯಿಸಿದ್ದಾಳೆ, 10 ಬೂತ್ ನಲ್ಲಿ ಮತ ಚಲಾವಣೆಯಾಗಿದೆ. ಈ ಮಹಿಳೆ ಬ್ರೇಜಿಲ್‌ನ ಮಾಡೆಲ್‌ ಅನ್ನೋದು ನಂತರ ಗೊತ್ತಾಗಿದೆ. 25 ಲಕ್ಷ ಮತ ಕಳ್ಳತನ ಆಗಿದೆ ಅನ್ನೋದಕ್ಕೆ ಈಕೆಯೇ ಉದಾಹರಣೆ ಎಂದು ದಾಖಲೆ ಸಮೇತ ಸತ್ಯ ಸಂಗತಿಯನ್ನ ಬಿಚ್ಚಿಟ್ಟರು.

ಒಂದೇ ಗುರುತಿನಲ್ಲಿ ಹಲವು ಮತಗಳನ್ನ ಚಲಾಯಿಸಲು ನಕಲಿ ಫೋಟೋಗಳನ್ನ ಬಳಸಲಾಗಿದೆ. ಹರಿಯಾಣ ಚುನಾವಣೆಯ 2 ಕೋಟಿ ಮತಗಳಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ. ಪ್ರತಿ 8 ಮತದಾರರಲ್ಲಿ ಒಂದು ಮತ ನಕಲಿ ಆಗಿದೆ. ಒಂದು ಗುರುತಿನ ಚೀಟಿಯಲ್ಲಿ ಒಂದೇ ಕ್ಷೇತ್ರದಲ್ಲಿ ನೂರು ಮತಗಳು ಕಂಡುಬಂದಿವೆ ಇವೆಲ್ಲವೂ ಮತಗಳ್ಳತನಕ್ಕೆ ಉದಾಹರನೆ ಎಂದು ರಾಗಾ ಬಾಂಬ್‌ ಹಾಕಿದರು.

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...