ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

Date:

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ–1 ಹಾಗೂ ಪರೀಕ್ಷೆ–2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು (ನವೆಂಬರ್ 5) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

ಮಂಡಳಿಯ ಪ್ರಕಟಣೆಯ ಪ್ರಕಾರ, ಎಸ್‌ಎಸ್‌ಎಲ್‌ಸಿ ಪರೀಕ್ಷೆ–1 2026ರ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ, ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ–1 ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿದೆ. ನಂತರ ಪರೀಕ್ಷೆ–2 ಹಂತದಲ್ಲಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಮೇ 18ರಿಂದ ಮೇ 25ರವರೆಗೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ–2 ಏಪ್ರಿಲ್ 25ರಿಂದ ಮೇ 9ರವರೆಗೆ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ–1 ವೇಳಾಪಟ್ಟಿ

ಮಾ. 18: ಪ್ರಥಮ ಭಾಷೆ

ಮಾ. 23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ

ಮಾ. 25: ದ್ವಿತೀಯ ಭಾಷೆ

ಮಾ. 28: ಗಣಿತ

ಮಾ. 30: ತೃತೀಯ ಭಾಷೆ / ಎನ್‌ಎಸ್‌ಕ್ಯೂಎಫ್ ವಿಷಯಗಳು

ಏ. 1: ಜಿಟಿಎಸ್ ವಿಷಯಗಳು

ಏ. 2: ಸಮಾಜ ವಿಜ್ಞಾನ

ದ್ವಿತೀಯ ಪಿಯುಸಿ ಪರೀಕ್ಷೆ–1 ವೇಳಾಪಟ್ಟಿ

ಫೆ. 28: ಕನ್ನಡ, ಅರೇಬಿಕ್

ಮಾ. 2: ಭೂಗೋಳಶಾಸ್ತ್ರ, ಅಂಕಿಅಂಶಗಳು, ಮನೋವಿಜ್ಞಾನ

ಮಾ. 3: ಇಂಗ್ಲಿಷ್

ಮಾ. 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾ. 5: ಇತಿಹಾಸ, ಗೃಹ ವಿಜ್ಞಾನ

ಮಾ. 6: ಭೌತಶಾಸ್ತ್ರ

ಮಾ. 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂ ವಿಜ್ಞಾನ

ಮಾ. 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ

ಮಾ. 10: ಅರ್ಥಶಾಸ್ತ್ರ

ಮಾ. 11: ತರ್ಕಶಾಸ್ತ್ರ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ

ಮಾ. 12: ಹಿಂದಿ

ಮಾ. 13: ರಾಜ್ಯಶಾಸ್ತ್ರ

ಮಾ. 14: ಲೆಕ್ಕಪತ್ರ ನಿರ್ವಹಣೆ

ಮಾ. 16: ಸಮಾಜಶಾಸ್ತ್ರ, ಗಣಿತ

ಮಾ. 17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ

ದ್ವಿತೀಯ ಪಿಯುಸಿ ಪರೀಕ್ಷೆ–2 ವೇಳಾಪಟ್ಟಿ

ಏ. 25: ಕನ್ನಡ, ಅರೇಬಿಕ್

ಏ. 27: ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ಜೀವಶಾಸ್ತ್ರ

ಏ. 28: ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಏ. 29: ಗಣಿತ, ಗೃಹ ವಿಜ್ಞಾನ, ಮೂಲ ಗಣಿತ

ಏ. 30: ಅರ್ಥಶಾಸ್ತ್ರ

ಮೇ 2: ಇತಿಹಾಸ, ರಸಾಯನಶಾಸ್ತ್ರ

ಮೇ 4: ಇಂಗ್ಲಿಷ್

ಮೇ 5: ಹಿಂದಿ

ಮೇ 6: ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ

ಮೇ 7: ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ

ಮೇ 8: ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ

ಮೇ 9: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್, ರಿಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

ಎಲ್ಲಾ ಶಾಲಾ ಮತ್ತು ಕಾಲೇಜುಗಳ ಪ್ರಾಂಶುಪಾಲರು ಮತ್ತು ಮುಖ್ಯಶಿಕ್ಷಕರು ತಮ್ಮ ಸಂಸ್ಥೆಗಳ ಪ್ರಕಟಣಾ ಫಲಕದಲ್ಲಿ ವೇಳಾಪಟ್ಟಿಯನ್ನು ಪ್ರದರ್ಶಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ. ವೇಳಾಪಟ್ಟಿ ಮಂಡಳಿಯ ಅಧಿಕೃತ ಜಾಲತಾಣ www.kseab.karnataka.gov.in ನಲ್ಲಿ ಲಭ್ಯವಿದೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...