ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!
ನವದೆಹಲಿ: ಭಾರತದ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ನಡೆದ ಭೀಕರ ಸ್ಫೋಟವು ದೇಶವನ್ನೇ ನಡುಗಿಸಿದೆ. ಈ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಲಖನೌ ಮೂಲದ ವೈದ್ಯೆ ಡಾ. ಶಾಹೀನ್ ಶಾಹೀದ್ ಳನ್ನ ಅರೆಸ್ಟ್ ಮಾಡಲಾಗಿದೆ. ವಿಚಾರಣೆ ವೇಳೆ, ಡಾ. ಶಾಹೀನ್ ಶಾಹೀದ್ ಜೈಶ್-ಎ-ಮೊಹಮ್ಮದ್ (ಜೆಎಂಎಂ) ಭಯೋತ್ಪಾದಕ ಸಂಘಟನೆಯ ಮಹಿಳಾ ವಿಭಾಗವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತಿದ್ದಳು ಎಂಬ ಸಂಗತಿ ಬಯಲಾಗಿದೆ.
ಶಾಹೀನ್ ಅಲ್-ಫಲಾಹ್ ವಿಶ್ವವಿದ್ಯಾಲಯದ ಭಾಗವಾಗಿದ್ದು, ಫರಿದಾಬಾದ್‌ನಲ್ಲಿ ಬಾಡಿಗೆಗೆ ಪಡೆದಿದ್ದ ಎರಡು ಕೊಠಡಿಗಳಿಂದ 2,900 ಕೆಜಿ ಸ್ಫೋಟಕಗಳು ಮತ್ತು ದಹನಕಾರಿ ವಸ್ತುಗಳನ್ನು ವಶಪಡಿಸಿಕೊಂಡ ನಂತರ ಬಂಧಿಸಲ್ಪಟ್ಟ ಕಾಶ್ಮೀರಿ ವೈದ್ಯ ಮುಜಮ್ಮಿಲ್ ಗನೈ ಅಲಿಯಾಸ್ ಮುಸೈಬ್ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾಳೆಂದು ವರದಿಯಾಗಿದೆ.ಪಾಕಿಸ್ತಾನದಲ್ಲಿರುವ ಜೆಇಎಂ ಸಂಸ್ಥಾಪಕ ಮಸೂದ್ ಅಜರ್ ಅವರ ಸಹೋದರಿ ಸಾದಿಯಾ ಅಜರ್ ನೇತೃತ್ವದ ಜೆಎಂನ ಮಹಿಳಾ ವಿಭಾಗ ಜಮಾತ್ ಉಲ್-ಮೊಮಿನಾತ್‌ನ ಭಾರತ ಶಾಖೆಯ ಜವಾಬ್ದಾರಿಯನ್ನು ಡಾ.ಶಾಹೀನ್ ಶಾಹಿದ್ಗೆ ವಹಿಸಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.






