ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

Date:

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು, ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತಿಮ್ಮಕ್ಕ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಅವರು ಇಂದು ನಿಧನರಾದರು. ಅವರ ನಿಧನಕ್ಕೆ ರಾಜಕೀಯ ನಾಯಕರು ಮತ್ತು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

Share post:

Subscribe

spot_imgspot_img

Popular

More like this
Related

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ!

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ! ನವದೆಹಲಿ:...

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...