ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

Date:

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದ್ದು, ಅವರ ಮೇಲೆ ವಿಧಿಸಲಾಗಿದ್ದ ಗಡಿಪಾರು ಆದೇಶವನ್ನು ರದ್ದು ಮಾಡಲಾಗಿದೆ.

ಧರ್ಮಸ್ಥಳ ಗ್ರಾಮದಲ್ಲಿನ ಬುರುಡೆ ಪ್ರಕರಣ ಮತ್ತು ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ಆರೋಪಕ್ಕೆ ಸಂಬಂಧಿಸಿದ ಗಡಿಪಾರು ಶಿಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ವಿಚಾರಣೆ ನ್ಯಾ. ಸೂರಜ್ ಗೋವಿಂದ್ ಪೀಠದ ನ್ಯಾಯಮೂರ್ತಿಗಳಿಂದ ನಡೆದಿದೆ. ಸೂಕ್ತ ಕಾರಣ, ಸೆಕ್ಷನ್​ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ.

ಏನಿದು ಪ್ರಕರಣ?
ತಿಮರೋಡಿಯನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶವನ್ನು ಮಹೇಶ್ ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...