ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ಬೆಂಗಳೂರಿನ ದಕ್ಷಿಣ ಭಾಗದ ಬಿಡದಿಯಲ್ಲಿ ಹೊಸ ಐಟಿ ನಗರ ನಿರ್ಮಾಣ ಕುರಿತು ಯೋಜನೆ ಆಲೋಚಿಸಲಾಗಿದೆ. ನಗರದಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಹೂಡಿಕೆಗಾಗಿ ನಾನಾ ದೇಶಗಳ ಉದ್ಯಮ ನಾಯಕರು ಎದುರಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ ಟೆಕ್ ಸಮ್ಮಿಟ್ ನಲ್ಲಿ 60 ದೇಶಗಳ ಪ್ರತಿನಿಧಿಗಳು ಮತ್ತು ದೇಶದ ಎಲ್ಲಾ ರಾಜ್ಯಗಳ ಪ್ರಮುಖರು, ಒಟ್ಟು ಸುಮಾರು 50 ಸಾವಿರ ಮಂದಿ ಭಾಗವಹಿಸಲಿದ್ದಾರೆ. 1,500 ದೊಡ್ಡ ಕಂಪೆನಿಗಳು ಭಾಗವಹಿಸಿ ಉದ್ಯೋಗ ಸೃಷ್ಟಿ ಮತ್ತು ಸಂಪಾದನೆಗೆ ಅವಕಾಶ ನೀಡಲಿದ್ದಾರೆ.
ಹೊಸ ಆವಿಷ್ಕಾರ, ತಂತ್ರಜ್ಞಾನ, ಸ್ಟಾರ್ಟ್ ಅಪ್ ಗಳನ್ನು ಪ್ರೋತ್ಸಾಹಿಸುವ ಮೂಲಕ ಕರ್ನಾಟಕವನ್ನು ಜಾಗತಿಕ ಮಟ್ಟದ ಸ್ಪರ್ಧೆಗೆ ತಲುಪಿಸುವುದೇ ಮುಖ್ಯ ಉದ್ದೇಶ. ಸರ್ಕಾರವು ಉದ್ಯಮಸ್ನೇಹಿ ವಾತಾವರಣ ನಿರ್ಮಿಸಿ, ಪ್ರತಿಭೆಗಳಿಗೆ ಉತ್ತಮ ಅವಕಾಶ ಕಲ್ಪಿಸಲು ಸಿದ್ಧವಾಗಿದೆ. ಮುಂದಿನ ಪೀಳಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಸದಾ ಪ್ರೋತ್ಸಾಹಿಸುತ್ತಿದ್ದೇವೆ ಎಂದುಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.






