ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ
ದಕ್ಷಿಣ ಕನ್ನಡ: ರಾಜ್ಯದಲ್ಲಿ ಆಡಳಿತ ಕಾಣಿಸುತ್ತಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇ ದಿನೇ ಹೆಚ್ಚುತ್ತಿದ್ದು, ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಅಧಿವೇಶನದಲ್ಲಿ ಮತ್ತು ಹೊರಗಡೆ ಹೋರಾಟಕ್ಕೆ ಪಕ್ಷ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.
ಮಾಧ್ಯಮಗಳಿಗೆ ಮಾತನಾಡಿದ ಅವರು, “ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದವರು ದೆಹಲಿಯಲ್ಲಿ ವ್ಯಾಪ್ತಿಯಲ್ಲಿ ಹೋಗಿ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಮೋಸಹೋದ ಭಾವನೆ ಮತದಾರರ ಮನಸ್ಸಿನಲ್ಲಿ ಇದೆ” ಎಂದು ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮಶತಾಬ್ದಿ ಸಂದರ್ಭದಲ್ಲಿ ಇಂದು ರಾಜ್ಯದಲ್ಲಿ ಅಭೂತಪೂರ್ವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಅವರು ರಾಜ್ಯದ ರೈತರು ಮತ್ತು ಕಬ್ಬು ಬೆಳೆಗಾರರ ತೀವ್ರ ಸಂಕಷ್ಟಕ್ಕೂ ಗಮನ ಸೆಳೆದಿದ್ದಾರೆ. ರೈತರು, ಮೆಕ್ಕೆ ಜೋಳ ಬೆಳೆಗಾರರು ಖರೀದಿ ಕೇಂದ್ರ ತೆರೆಯಲಾಗದ ಕಾರಣ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ.






