ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅತ್ಯುನ್ನತ ರಾಷ್ಟ್ರೀಯ ಗೌರವವಾದ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಈ ಬಾರಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಲಭಿಸಿದೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಅವರು ನೀಡಿದ ಅಸಾಧಾರಣ ಸೇವೆ ಮತ್ತು ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಸ್ಥೆಯ ರಾಷ್ಟ್ರೀಯ ಪ್ರಶಸ್ತಿ ಸಮಿತಿ ಪ್ರಕಟಿಸಿದೆ.
ಈ ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ 28 ರಂದು ಲಕ್ಕೋದಲ್ಲಿ ನಡೆಯಲಿರುವ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದಾರೆ.






