ಕಸದ ಮಾಫಿಯಾಕ್ಕೆ ಬಗ್ಗದೇ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ: ಡಿ.ಕೆ.ಶಿವಕುಮಾರ್

Date:

ಕಸದ ಮಾಫಿಯಾಕ್ಕೆ ಬಗ್ಗದೇ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ: ಡಿ.ಕೆ.ಶಿವಕುಮಾರ್

ಬೆಂಗಳೂರು: “ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ. ಕಸದಿಂದ ರಸ ತೆಗೆಯಬೇಕು ಎಂದು ಹೊರಟಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಮಾಗಡಿ ಮುಖ್ಯ ರಸ್ತೆಯ ಕನ್ನಹಳ್ಳಿಯಲ್ಲಿ ಸಮಗ್ರ ಘನ ತ್ಯಾಜ್ಯ ವಿಂಗಡಣಾ ಘಟಕದ 1ನೇ ಹಂತಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. “ಈ 33 ಪ್ಯಾಕೇಜ್ ಗೆ ನ್ಯಾಯಾಲಯ ಸಮ್ಮತಿ ನೀಡಿದೆ. ಸ್ವಲ್ಪ ‌ದಿನಗಳಲ್ಲೇ ಇವು ಕಾರ್ಯರೂಪಕ್ಕೆ ಬರಲಿದೆ.

ಕಸದ ಮಾಫಿಯಾ ಎನ್ನುವ ಪದವನ್ನು ನಾನು ಪದೇ ಪದೆ ಏಕೆ ಬಳಸುತ್ತಿದ್ದೇನೆ ಎಂದರೆ. ಇವರು ಪ್ರತಿ ಹಂತದಲ್ಲಿ ನ್ಯಾಯಾಲಯಗಳಿಗೆ ತೆರಳಿ ತಡೆಯಾಜ್ಞೆ ತಂದು ಸರ್ಕಾರಕ್ಕೆ ಬ್ಲಾಕ್ ಮೇಲ್ ಮಾಡುತ್ತಿದ್ದರು. ಇವರುಗಳು ಹೇಳಿದಂತೆ ಸರ್ಕಾರ ಕೇಳಬೇಕು ಎನ್ನುವ ಧೋರಣೆ ಹೊಂದಿದ್ದರು.‌ ಇದಕ್ಕೆಲ್ಲ ಕಡಿವಾಣ ಹಾಕಲಾಗಿದೆ” ಎಂದರು.

ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲೇ ಬೇಕು ಎಂದು ನಾನು ಸಂಕಲ್ಪ ಮಾಡಿದ್ದೇನೆ. ಸ್ವಯಂಸೇವಾ ಸಂಸ್ಥೆ ಹಸಿರು ದಳದವರು ಸೇರಿ ಅತ್ಯಂತ ಕ್ಲಿಷ್ಟಕರ ಕೆಲಸ ಮಾಡುತ್ತಿದ್ದಾರೆ. ನಗರದ ಅನೇಕ ಕಡೆ ಜನರು ಎಲ್ಲೆಂದರಲ್ಲಿ ಕಸ ಎಸೆಯುವುದು, ಕಟ್ಟಡ ತ್ಯಾಜ್ಯ ಸುರಿದು ಹೋಗುತ್ತಿದ್ದಾರೆ.‌ ಇದರ ನಿಯಂತ್ರಣಕ್ಕೆ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ದಂಡ ಕಟ್ಟಿಸಿಕೊಳ್ಳಲಾಗುತ್ತಿದೆ. ಕಸ ಸುರಿಯುವ ವಾಹನಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ” ಎಂದರು.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...