No menu items!
10.4 C
Munich
Friday, May 22, 2026

ಕರ್ನಾಟಕದ ಕೆಲವೆಡೆ ಸಾಧಾರಣ ಮಳೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ – ಹವಾಮಾನ ಇಲಾಖೆ

Must read

ಕರ್ನಾಟಕದ ಕೆಲವೆಡೆ ಸಾಧಾರಣ ಮಳೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ – ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ವಿವಿಧತೆಯ ಹವಾಮಾನ ಕಾಣಿಸಿಕೊಂಡಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಒಣ ಹವೆಯ ವಾತಾವರಣ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ಬೆಳಗ್ಗೆ ಹಾಗೂ ಚಳಿಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಮೈಸೂರು, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ, ಬಳ್ಳಾರಿ, ಬೆಂಗಳೂರು ನಗರ–ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತಿ ಕಡಿಮೆವಾಗಿದ್ದು, ಒಣ ಹವಾಮಾನವೇ ಮುಂದುವರಿಯಲಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆಯೇ ಮುಂದುವರಿಯುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಹ ಮಳೆಯ ಸೂಚನೆ ಇಲ್ಲ.

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಮುಂದುವರಿಯಲಿದ್ದು, ಚಳಿ ಹೆಚ್ಚುವ ಸಾಧ್ಯತೆ ಇದೆ. ಗಾಳಿಯ ವೇಗ ಪ್ರತಿ ಗಂಟೆಗೆ ಸುಮಾರು 11 ಕಿ.ಮೀ ಇರಲಿದ್ದು, ಗರಿಷ್ಠ ತಾಪಮಾನ 28°C ಹಾಗೂ ಕನಿಷ್ಠ ತಾಪಮಾನ 17°C ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -spot_img

More articles

- Advertisement -spot_img

Latest article