ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಹಾಗೂ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಮೊದಲು ಜಾರಿಗೆ ತಂದಿದ್ದೆ, ಮಹಿಳೆಯರಿಗಾಗಿ ಘೋಷಣೆಯಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಗಳನ್ನು ಸರ್ಕಾರಿ ನೌಕರರಾದರೂ ನಿಮಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿದೆಯಲ್ಲವೇ?
ಸರ್ಕಾರಿ ಮಹಿಳಾ ನೌಕರರು ಶಕ್ತಿ ಯೋಜನೆ ಮೂಲಕ ಉಚಿತ ಪ್ರಯಾಣ ಮಾಡಬಹುದಲ್ಲವೇ? ಬಡ ಮಹಿಳೆಯರಿಗೆ 2 ಸಾವಿರ ನೀಡುತ್ತಿದ್ದೇವೆ ಅಲ್ಲವೇ? ನಮ್ಮ ಯೋಜನೆ ನೋಡಿ ಇಡೀ ದೇಶದಲ್ಲಿ ಈ ಯೋಜನೆ ಜಾರಿ ಮಾಡುತ್ತಿದ್ದಾರಲ್ಲವೇ? ಹೀಗಾಗಿ ಮಹಿಳಾ ಸಬಲೀಕರಣ ವಿಚಾರದಲ್ಲಿ ನಾವು ಭದ್ರ ಅಡಿಪಾಯ ಹಾಕಿದ್ದೇವೆ.
ಮಹಿಳೆಯರ ಪರವಾಗಿ ಚಿಂತನೆ ಮಾಡಿರುವ ಸರ್ಕಾರ ಇದ್ದರೆ ಅದು ನಮ್ಮ ಸರ್ಕಾರ ಮಾತ್ರ. ಮಹಿಳೆಯರು ಉಪಕಾರ ಸ್ಮರಣೆ ಇಟ್ಟುಕೊಂಡಿರುತ್ತಾರೆ. ತಾಯಿ ಹೃದಯದವರು, ಸಹಾಯ ಮಾಡಿದವರನ್ನು ಸ್ಮರಿಸುತ್ತೀರಿ ಎಂದು ನಾವು ಮಹಿಳೆಯರಿಗಾಗಿ ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ತಿಳಿಸಿದರು.
ನೀವು ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್. ಪಂಚಾಯ್ತಿಯಲ್ಲಿ ನಾವು 50% ಮೀಸಲಾತಿ ನೀಡಿದ್ದು, ಸಂಸತ್ ಚುನಾವಣೆಯಲ್ಲಿ 33% ಜಾರಿಯಾಗುವ ಹಂತದಲ್ಲಿದೆ. ಇದರಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 70 ಕ್ಷೇತ್ರಗಳಲ್ಲಿ ಮಹಿಳಾ ಶಾಸಕಿಯರು ಆಯ್ಕೆಯಾಗಲಿದ್ದಾರೆ. ನಾಯಕತ್ವ ಗುಣ ಇರುವ ಸರ್ಕಾರಿ ಮಹಿಳಾ ನೌಕರರಿಗೆ ನಾವು ಟಿಕೆಟ್ ನೀಡಿ ಗೆಲ್ಲಿಸಿದ್ದೇವೆ. ಹಲವರು ಶಾಸಕಿಯರಾಗಿದ್ದಾರೆ. ಮೀಸಲಾತಿ ಬಂದ ನಂತರ ಯಾರು ನಾಯಕಿಯರಾಗುತ್ತೀರೋ ಗೊತ್ತಿಲ್ಲ” ಎಂದು ಹೇಳಿದರು.






