ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

Date:

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಕುರಿತಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋ ಹಿನ್ನೆಲೆ, ಬೆಂಗಳೂರಿನ ಪಬ್‌ನಲ್ಲಿನ ಅವಿಧೇಯ ವರ್ತನೆ ಆರೋಪದ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಪ್ರಾಥಮಿಕ ತನಿಖೆಯನ್ನು ಆರಂಭಿಸಿದ್ದಾರೆ. ಈ ಕುರಿತು ಇಂದಿಗೂ ಯಾವುದೇ ಅಧಿಕೃತ ದೂರು ದಾಖಲಾಗದಿದ್ದರೂ, ಸಾರ್ವಜನಿಕ ಆಕ್ರೋಶದಿಂದಾಗಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ.

ಕಬ್ಬನ್ ಪಾರ್ಕ್ ಎಸಿಪಿ ಪ್ರಿಯದರ್ಶಿನಿ ಅವರ ನೇತೃತ್ವದ ವಿಶೇಷ ತಂಡವು ಪಬ್‌ಗೆ ಭೇಟಿ ನೀಡಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದೆ. ಪಬ್ ಮ್ಯಾನೇಜರ್‌ರನ್ನು ವಿಚಾರಣೆ ಮಾಡಲಾಗಿದ್ದು, ಘಟನೆಯ ಸ್ವರೂಪ ಮತ್ತು ವಿಡಿಯೋದಲ್ಲಿ ಕಾಣಿಸಿಕೊಳ್ಳುವ ವರ್ತನೆ ನಿಜವಾಗಿಯೂ ನಡೆದಿದೆಯೇ ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಆರ್ಯನ್ ಖಾನ್ ಅವರು ನವೆಂಬರ್ 29ರಂದು ‘ಸೌರ್‌ಬೆರ್ರಿ’ ಪಬ್‌ಗೆ ಅತಿಥಿಯಾಗಿ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅವರು ಸಾರ್ವಜನಿಕವಾಗಿ ಮಧ್ಯದ ಬೆರಳು ತೋರಿಸಿದರೆಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರೂ, ಅದರ ಸತ್ಯಾಸತ್ಯತೆ ಸಿಸಿಟಿವಿ ಪರಿಶೀಲನೆಯ ಮೂಲಕ ಸ್ಪಷ್ಟವಾಗಬೇಕಿದೆ. ಈ ವರ್ತನೆ ಯಾರಿಗೆ ತೋರಿಸಲಾಯಿತು? ಮಹಿಳೆಯರ ಕಡೆಗೆ ನಡೆದಿತ್ತೇ? ಉದ್ದೇಶಪೂರ್ವಕವಾಗಿತ್ತೆ? ಎಂಬ ಬಗ್ಗೆ ಪೊಲೀಸರು ವಿವರವಾಗಿ ಪರಿಶೀಲಿಸುತ್ತಿದ್ದಾರೆ.

ತನಿಖಾ ತಂಡವು ಆರ್ಯನ್ ಖಾನ್ ಅವರ ಜೊತೆ ಮಾಜಿ ಶಾಸಕ ನಲಪಾಡ್ ಮತ್ತು ನಟ ಝೈದ್ ಖಾನ್ ಕೂಡ ಇದ್ದಾರೆ ಎಂಬ ಮಾಹಿತಿಯನ್ನು ಸಂಗ್ರಹಿಸಿದೆ. ಇನ್ನೂ ಯಾವುದೇ ಅಧಿಕೃತ ದೂರು ದಾಖಲಾಗದಿದ್ದರೂ, ವಿಡಿಯೋ ವೈರಲ್ ಆಗಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...

‘ಬುರುಡೆ’ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜಾಮೀನು ಸಿಕ್ಕಿದ್ರು ಬಿಡುಗಡೆ ಭಾಗ್ಯವಿಲ್ಲ

‘ಬುರುಡೆ’ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜಾಮೀನು ಸಿಕ್ಕಿದ್ರು ಬಿಡುಗಡೆ ಭಾಗ್ಯವಿಲ್ಲ ಶಿವಮೊಗ್ಗ:...