ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

Date:

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಹಣಕಾಸು ವಿನಿಮಯದ ಮಾಹಿತಿಗಳನ್ನು ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್‌ ಅವರಿಗೆ ಮಾಹಿತಿ ಇರಬಹುದು ಎಂಬ ಶಂಕೆಯ ಮೇಲೆ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ನ.29ರಂದು ಈ ನೋಟಿಸ್‌ ಕಳಿಸಿದೆ. 

ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ ಅವರು, ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಇಡಿ ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ. ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದರು.

Share post:

Subscribe

spot_imgspot_img

Popular

More like this
Related

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...