ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ. ಕಳೆದ ಒಂದು ವರ್ಷದಿಂದ ಕೈಗಾರಿಕೆ ಸ್ಥಾಪನೆಗೆ ಜಾಗ ಹುಡುಕಲು ಜಿಲ್ಲಾಧಿಕಾರಿಗೆ ಹೇಳುತ್ತಿದ್ದೇನೆ. ಇನ್ನೂ ಜಾಗ ಸಿಕ್ಕಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಇಲ್ಲಿನ ವಿಸಿ ಫಾರಂನಲ್ಲಿ ನಡೆಯುತ್ತರಿರುವ ಕೃಷಿ ಮೇಳದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಕೇಂದ್ರ ಸಚಿವರು; ಕುಮಾರಣ್ಣ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಜಿಲ್ಲೆಗೆ ಏನಾದರೂ ಕೈಗಾರಿಕೆ ತರಬಹುದು ಎಂಬ ನಿರೀಕ್ಷೆ ಜನರಲ್ಲಿದೆ. ಕನಿಷ್ಠ ಒಂದು ಕಾರ್ಖಾನೆಯನ್ನಾದರು ಮಂಡ್ಯಕ್ಕೆ ತರಲು ಒಂದು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಇನ್ನೂ ಸರಕಾರ ನಮಗೆ ಜಾಗ ನೀಡಿಲ್ಲ ಎಂದರು.
ರಾಜ್ಯದಲ್ಲಿ ನನ್ನ ಇಲಾಖೆ ಯಿಂದ ಸಾಧ್ಯವಾಗುವ ಕೆಲಸಗಳನ್ನು ಮಾಡುತ್ತಿದ್ದೇನೆ. ಭದ್ರಾವತಿಯಲ್ಲರಿವ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ ಚಿಂತನೆ ನಡೆಸಲಾಗಿದೆ. ಇತ್ತೀಚೆಗೆ ನಾನು ಆ ಕಾರ್ಖಾನೆಗೆ ಎರಡನೇ ಸಲ ಭೇಟಿ ನೀಡಿದ್ದೆ ಎಂದು ಕೇಂದ್ರ ಸಚಿವರು ಹೇಳಿದರು.
ಕೃಷಿ ಮೇಳ ಅತ್ಯಂತ ಯಶಸ್ವಿಯಾಗಿದೆ. ಪ್ರತಿ ಗ್ರಾಮ ಗ್ರಾಮಕ್ಕೂ ಈ ಮೇಳದ ಉದ್ದೇಶ ತಲುಪಿದೆ. ಕೇಂದ್ರ ಸರ್ಕಾರವು ಕೃಷಿ ವಲಯಕ್ಕೆ 1.32 ಲಕ್ಷದ ಕೋಟಿ ಅನುದಾನ ಹಂಚಿಕೆ ಮಾಡಿದೆ. ಮೆಕ್ಕೆಜೋಳ ಖರೀದಿಸುವಂತೆ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಖರೀದಿ ಕೇಂದ್ರ ತೆರೆದು MSP ದರದಲ್ಲಿ ರಾಜ್ಯ ಸರ್ಕಾರ ಖರೀದಿ ಮಾಡಬೇಕು. ಆದರೆ ಪಶು ಆಹಾರ ತಯಾರಕರ ಸಭೆ ನಡೆಸಿ,
KMFಗೆ 50ಸಾವಿರ ಕೆಜಿ ಮೆಕ್ಕೆಜೋಳ ಖರೀದಿಸುವಂತೆ ಹೇಳಿ ಸರ್ಕಾರ ಕೈ ತೊಳೆದುಕೊಂಡಿದೆ. ನಾನು ಸಿಎಂ ಆಗಿದ್ದಾಗ 2 ಅವಧಿಯಲ್ಲೂ ರೈತರ ತಮ್ಮ ಬೆಳೆ ಮಾರಾಟ ಮಾಡಲಾಗದೆ ಪ್ರತಿಭಟಿಸಲಿಲ್ಲ. ಆಧುನಿಕ ಉಪಕರಣಗಳನ್ನು ರೈತರು ಬಳಸಿದರೆ 50% ಹಣ ಉಳಿತಾಯ ಮಾಡಬಹುದು. ಕೃಷಿ ವಿಜ್ಞಾನಿಗಳ ಸಂಶೋಧನೆ ರೈತನ ಮನೆ ಮುಟ್ಟಬೇಕು ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.






