ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಕ್ರಮ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Date:

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಕ್ರಮ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಳಗಾವಿ: ಬೆಂಗಳೂರು ನಗರದಲ್ಲಿ ತ್ಯಾಜ್ಯ ಉತ್ಪಾದನೆ ದಿನೇ ದಿನೇ ಹೆಚ್ಚಾಗುತ್ತಿದ್ದು ಪ್ರತಿ ದಿನ ಸುಮಾರು 5600 ಮೆ.ಟನ್ ತ್ಯಾಜ್ಯ ಉತ್ಪಾದನೆ ಆಗುತ್ತಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಸಮಗ್ರ ಘನತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಧೀರಜ್ ಮುನಿರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉತ್ತರಿಸಿದರು.

ಬೆಂಗಳೂರು ನಗರದಲ್ಲಿ 8000ಕ್ಕೂ ಹೆಚ್ಚು ಟನ್ ಕಸ ಸಂಗ್ರಹವಾಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ 2 ದಿಕ್ಕುಗಳಲ್ಲಿ (ಉತ್ತರ ಮತ್ತ ದಕ್ಷಿಣ) ಘಟಕಗಳನ್ನು ಸ್ಥಾಪಿಸಲು ಉದ್ದೇಶಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಹÀಸಿ ತ್ಯಾಜ್ಯದ ಬಯೋ ಮಿಥಿನೇಷನ್ ನಿಂದ ಅನಿಲ ಉತ್ಪಾದನೆ, ಗೊಬ್ಬರ ತಯಾರಿಕೆ, ಒಣತ್ಯಾಜ್ಯದ ಮರುಬಳಕೆ ಮತ್ತು ವಿದ್ಯುತ್ ಉತ್ಪಾದನೆ ಇತ್ಯಾದಿ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ ಎಂದು ಅವರು ವಿವರಿಸಿದರು.
ನೂತನ ಮಾದರಿಯ ಟೆಕ್ನಾಲಜಿ ಬಳಸಿಕೊಂಡು ಘನತ್ಯಾಜ್ಯ ವಿಲೇವಾರಿ ಮಾಡಲು ಸರ್ಕಾರ ಕ್ರಮ ವಹಿಸುತ್ತಿದೆ.

ಮಂಗಳೂರಿನಲ್ಲಿ ಇತ್ತೀಚೆಗೆ ಕೀಟ (Black Soldier Fly) ಕಸವನ್ನು ತಿಂದು ಗೊಬ್ಬರವಾಗುವ ಬಗ್ಗೆ ವರದಿಯಾಗಿರುತ್ತದೆÉ. ಈ ಬಗ್ಗೆ ಸಮೀಕ್ಷೆ ನಡೆಸಿ ಅದನ್ನು ಬಳಸಿಕೊಳ್ಳಬಹುದೇ ಎಂಬ ಬಗ್ಗೆ ಯೋಚಿಸಲಾಗುತ್ತಿದೆ. ಇದಲ್ಲದೇ ಇನ್ನೂ 2-3 ಪ್ರಯೋಗಗಳ ಬಗ್ಗೆ ಚಿಂತನೆ ನಡೆಸಲಾಗಿದೆ. ಒಟ್ಟಾರೆಯಾಗಿ ಜನ ಸಾಮಾನ್ಯರ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗದಂತೆ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ಸರ್ಕಾರ ಕ್ರಮ ವಹಿಸುತ್ತಿದೆ ಎಂದು ಭರವಸೆ ನೀಡಿದರು.

Share post:

Subscribe

spot_imgspot_img

Popular

More like this
Related

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ್‌

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ್‌ ಬೆಳಗಾವಿ:...

ಮಹಿಳೆಯರಿಗೆ ಋತುಚಕ್ರ ರಜೆ ನೀಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್​​ ತಡೆ!

ಮಹಿಳೆಯರಿಗೆ ಋತುಚಕ್ರ ರಜೆ ನೀಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್​​ ತಡೆ! ಬೆಂಗಳೂರು: 18...

ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ: ಡಿ.ಕೆ. ಶಿವಕುಮಾರ್

ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ: ಡಿ.ಕೆ....

ಒಂದೇ ಕಡೆ ಕುಳಿತರೆ ಹೊಟ್ಟೆ ಬೊಜ್ಜು ಕರಗುತ್ತಾ? ಅಸಲಿ ಸತ್ಯ ತಿಳಿದುಕೊಳ್ಳಿ!

ಒಂದೇ ಕಡೆ ಕುಳಿತರೆ ಹೊಟ್ಟೆ ಬೊಜ್ಜು ಕರಗುತ್ತಾ? ಅಸಲಿ ಸತ್ಯ ತಿಳಿದುಕೊಳ್ಳಿ! ಇಂದಿನ...