ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

Date:

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಸಾಮಾನ್ಯವಾಗಿ ಅಂತಾರಾಷ್ಟ್ರೀಯ ವಿದ್ಯಮಾನಗಳು, ಡಾಲರ್ ಸ್ಥಾನಮಾನ ಹಾಗೂ ಸ್ಥಳೀಯ ಬೇಡಿಕೆಗಳಿಗನುಗುಣವಾಗಿ ಬಂಗಾರ ಹಾಗೂ ಬೆಳ್ಳಿ ದರಗಳಲ್ಲಿ  ಏರಿಳಿತವಾಗುತ್ತಲೇ ಇರುತ್ತದೆ. ಅಲ್ಲದೆ, ಇತ್ತೀಚೆಗೆ ಕೆಲವು ದೊಡ್ಡ ದೊಡ್ಡ ರಾಷ್ಟ್ರಗಳು ಹೆಚ್ಚು ಹೆಚ್ಚು ಚಿನ್ನ ಖರೀದಿ ಮಾಡುತ್ತಿರುವುದು ಪರೋಕ್ಷವಾಗಿ ಚಿನ್ನದ ದರದ ಮೇಲೆ ಪ್ರಭಾವ ಬೀರುತ್ತಿದೆ ಎನ್ನಲಾಗಿದೆ.

ಒಟ್ಟಿನಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡಲು ಇದು ಅತಿ ಉತ್ತಮ ಸಮಯ ಎಂದು ಹಲವು ಪರಿಣಿತರು ವಿಶ್ಲೇಷಿಸುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಹಲವು ತೀವ್ರತರವಾದ ವಿದ್ಯಮಾನಗಳು ಜರುಗುತ್ತಿದ್ದು ಒಂದೆಡೆ ಕೆಲವು ದೇಶಗಳು ತಮ್ಮ ಚಿನ್ನ ಖರೀದಿಯನ್ನು ಹೆಚ್ಚಿಸುತ್ತಿವೆ.

ಚಿನ್ನದ ಬೆಲೆ ಇಂದು ಬುಧವಾರ ಅಲ್ಪ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಬರೋಬ್ಬರಿ 9 ರೂಗಳಷ್ಟು ಹೆಚ್ಚಳ ಆಗಿದೆ. ಆಭರಣ ಚಿನ್ನದ ಬೆಲೆ 11,925 ರೂನಿಂದ 11,945 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 13,031 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 190 ರೂನಿಂದ 199 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 207 ರೂ ಆಗಿದೆ.

 ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,19,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,30,031 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,19,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 10ಕ್ಕೆ)

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,031 ರೂ
22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,945 ರೂ
18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,773 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,031 ರೂ
22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,945 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

ಬೆಂಗಳೂರು: 11,945 ರೂ
ಚೆನ್ನೈ: 12,030 ರೂ
ಮುಂಬೈ: 11,945 ರೂ
ದೆಹಲಿ: 11,960 ರೂ
ಕೋಲ್ಕತಾ: 11,945 ರೂ
ಕೇರಳ: 11,945 ರೂ
ಅಹ್ಮದಾಬಾದ್: 11,950 ರೂ
ಜೈಪುರ್: 11,960 ರೂ
ಲಕ್ನೋ: 11,960 ರೂ
ಭುವನೇಶ್ವರ್: 11,945 ರೂ

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ! ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ...

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...