ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

Date:

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ ವಿಧೇಯಕವು ಸಂವಿಧಾನ ನಮಗೆ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ ವಿಧೇಯಕವು ಸಂವಿಧಾನ ನಮಗೆ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ.
ಈ ವಿಧೇಯಕದ ಮೂಲಕ ಕಾಂಗ್ರೆಸ್ ಸ ರ್ಕಾರವು 1975 ರ ತುರ್ತು ಪರಿಸ್ಥಿತಿಯನ್ನು ಮರುಕಳಿಸುವ ಕುತಂತ್ರ ಮಾಡುತ್ತಿದೆ, ಇದರಿಂದ ಕಾಂಗ್ರೆಸ್ ಸರ್ಕಾರದ ಪತನದ ದಿನ ದೂರವಿಲ್ಲ ಎಂದು ನಿಖಿಲ್ ಅವರು ವ್ಯಂಗ್ಯವಾಡಿದರು.
ಈ ವಿಧೇಯಕದವನ್ನ ಮಾನ್ಯ ಗೃಹ ಸಚಿವ ಪರಮೇಶ್ವರ್ ಅವರ ಮಂಡಿಸಿದ್ದಾರೆ. ಅವರಿಗೆ ಏನು ಗೊತ್ತಿಲ್ಲ, ಈ ಬಿಲ್ನನ್ನು ಬೇರೆ ಯಾರೋ ತಯಾರಿಸಿ ಗೃಹ ಸಚಿವರ ಮೂಲಕ ಜಾರಿಗೆ ತರಲು ಯತ್ನಿಸುತ್ತಿದ್ದಾರೆ. ಆದರೆ ಏನು ಗೊತ್ತಿಲ್ಲದ ಮಂತ್ರಿಗಳು ಇಷ್ಟೊಂದು ಕಟುವಾದ ವಿಧೇಯಕ ಮಂಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ಕಾನೂನಿನ ಮೂಲಕ ಮಾಧ್ಯಮಗಳನ್ನು, ರಾಜಕೀಯ ಪಕ್ಷದ ಕಾರ್ಯಕರ್ತರನ್ನು ಹಾಗೂ ವಿರೋಧ ಪಕ್ಷದ ಕಾರ್ಯಕರ್ತರನ್ನು ಹೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಅದು ಈ ಸರ್ಕಾರದಿಂದ ಸಾಧ್ಯವಿಲ್ಲ. ಈ ವಿಧೇಯಕದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಹೋರಾಟ ಮಾಡಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್ ಬೆಳಗಾವಿ: ಧಾರವಾಡ ಜಿಲ್ಲೆಯ...

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ ಬೆಳಗಾವಿ: ಮಾನ್ಯ ಮುಖ್ಯಮಂತ್ರಿಗಳೇ,...

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ ಬೆಳಗಾವಿ: ಉತ್ತರಕನ್ನಡ...