ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್

Date:

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನ್ಯಾಯಾಲಯದಿಂದ ರಿಲೀಫ್ ದೊರೆತಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಇಡಿ) ಮುಂದಿನ ತನಿಖೆಯನ್ನು ಮುಂದುವರೆಸಬಹುದು ಎಂದು ಹೇಳಿದೆ.

ಆದರೆ, ಇಡಿ ದಾಖಲಿಸಿರುವ ಪ್ರಕರಣವು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರು ಹಾಗೂ ಮ್ಯಾಜಿಸ್ಟ್ರೇಟ್ ನೀಡಿದ ಸಮನ್ಸ್ ಆದೇಶಗಳ ಆಧಾರಿತವಾಗಿದ್ದು, ಯಾವುದೇ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಆಧರಿತವಾಗಿಲ್ಲ. ಈ ಕಾರಣದಿಂದ ಈ ಹಂತದಲ್ಲಿ ಇಡಿ ಪ್ರಕರಣವನ್ನು ಗಮನಕ್ಕೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದೇ ಸಂದರ್ಭದಲ್ಲಿ, ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ದಾಖಲಿಸಿರುವ ಹೊಸ ಎಫ್‌ಐಆರ್‌ನಿಂದ ಉದ್ಭವಿಸಿದ ವಿಚಾರಣೆಯಲ್ಲಿ ಕೂಡ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿಗಳಾಗಿರುವ ರಾಹುಲ್ ಗಾಂಧಿ,

ಸೋನಿಯಾ ಗಾಂಧಿ ಸೇರಿದಂತೆ ಇತರ ಆರೋಪಿಗಳು ಈ ಎಫ್‌ಐಆರ್‌ನ ಪ್ರತಿಯನ್ನು ಪಡೆಯಲು ಅರ್ಹರಲ್ಲ ಎಂದು ರೌಸ್ ಅವೆನ್ಯೂ ನ್ಯಾಯಾಲಯ ತೀರ್ಮಾನಿಸಿದೆ. ನ್ಯಾಯಾಲಯದ ಈ ಆದೇಶವನ್ನು ಗಾಂಧಿ ಕುಟುಂಬಕ್ಕೆ ಕಾನೂನು ಮಟ್ಟದಲ್ಲಿ ದೊಡ್ಡ ನಿರಾಳತೆ ಎಂದು ಪರಿಗಣಿಸಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಡಾ.ಕಸ್ತೂರಿ ರಂಗನ್ ವರದಿ: ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆ ತಿರಸ್ಕಾರ – ಈಶ್ವರ ಖಂಡ್ರೆ

ಡಾ.ಕಸ್ತೂರಿ ರಂಗನ್ ವರದಿ: ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆ ತಿರಸ್ಕಾರ...

ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಪೌರಾಡಳಿತ ಸಚಿವ ರಹೀಂ ಖಾನ್

ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಪೌರಾಡಳಿತ...

ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ: ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ: ಸಿದ್ದರಾಮಯ್ಯ ಬೆಳಗಾವಿ: ರಾಜ್ಯದಲ್ಲಿ...

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು...