No menu items!
10.1 C
Munich
Tuesday, April 14, 2026

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿ.ಕೆ.ಶಿವಕುಮಾರ್

Must read

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿ.ಕೆ.ಶಿವಕುಮಾರ್

ಬೆಳಗಾವಿ: ಆಲಮಟ್ಟಿ ಜಲಾಶಯದಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಮತ್ತು ಅತೀ ದೊಡ್ಡ ಅಂಗಡಿಗಳ ಮಾಲೀಕರಿಗೆ ನವನಗರದ ಯುನಿಟ್-3ರ ಅನುಮೋದಿತ ನಕ್ಷೆಯಲ್ಲಿನ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಿ, ಪರಿಷ್ಕೃತ ನಕ್ಷೆಗೆ ಅನುಮೋದನೆ ನೀಡುವ ಪ್ರಸ್ತಾವನೆಯನ್ನು ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಪಿ.ಹೆಚ್. ಪೂಜಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿದರು. ಪ್ರಸ್ತುತ, ಸದರಿ ಪ್ರಸ್ತಾವನೆಯು ಕರ್ನಾಟಕ ನಗರ & ಗ್ರಾಮಾಂತರ ಯೋಜನಾ ತಿದ್ದುಪಡಿ ಕಾಯಿದೆ ಅನುಸಾರ ಬಾಗಲಕೋಟೆಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪರಿಶೀಲನಾ ಹಂತದಲ್ಲಿದ್ದು, ನಗರಾಭಿವೃದ್ಧಿ ಪ್ರಾಧಿಕಾರ, ಬಾಗಲಕೋಟೆ ಇವರ ಅನುಮೋದನೆ ನಂತರವೇ ನಿಯಾಮನುಸಾರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

- Advertisement -spot_img

More articles

- Advertisement -spot_img

Latest article