ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ
ಬೆಳಗಾವಿ: ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನಗೇಕೆ ಅದೆಲ್ಲಾ? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮರುಪ್ರಶ್ನಿಸಿದ್ದಾರೆ.
ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಗುರುವಾರ ರಾತ್ರಿ ಡಿನ್ನರ್ ಮೀಟಿಂಗ್ ನಡೆದಿದೆಯಲ್ಲ ಎಂದು ಕೇಳಿದಾಗ ಡಿಸಿಎಂ ಈ ರೀತಿ ಉತ್ತರಿಸಿದರು.
ಎಲ್ಲ ಸೇರಿ ಊಟ ಮಾಡೋದ್ರಲ್ಲಿ ತಪ್ಪು ಹುಡುಕಬೇಡಿ ಎಂದರು.ಅಲ್ಲಿ ಬರೀ ನಾಲ್ಕೈದು ಜನ ಸೇರಿದ್ರಂತೆ ಎಂದು ಮಾಧ್ಯಮದವರು ಕೇಳಿದಾಗ, “ಅದು ನನಗ್ಯಾಕೆ ಬೇಕು. ನನ್ನನ್ಯಾಕೆ ಈ ಪ್ರಶ್ನೆ ಕೇಳ್ತೀರಿ” ಎಂದು ಮರು ಪ್ರಶ್ನಿಸಿದರು.






