No menu items!
12.4 C
Munich
Wednesday, April 29, 2026

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

Must read

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ನವದೆಹಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ.

ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿಗಳು ತಮ್ಮ ಪ್ರಸ್ತಾವನೆ ಕುರಿತ ಪತ್ರವನ್ನು ನೀಡಿದರು.

ಮಾಜಿ ಪ್ರಧಾನಿಗಳಾದ ದೇವೇಗೌಡರು ಹುಣಸೆ, ಹಲಸು ಮತ್ತು ನೇರಳೆ ಔಷಧ ಗುಣಗಳುಳ್ಳ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಾಗಿವೆ, ಇವುಗಳನ್ನು ಶತಮಾನಗಳಿಂದ ಭಾರತದಲ್ಲಿ ಬೆಳೆಯಲಾಗುತ್ತಿದೆ. ಈ ಬೆಳೆಗಳು ಸಾವಯವವಾಗಿ ಬೆಳೆಯುತ್ತವೆ, ಪ್ರಕೃತಿಯಲ್ಲಿ ಇವು ಸಶಕ್ತವಾಗಿ ಬೆಳೆಯುತ್ತವೆ. ಕಡಿಮೆ ಮಳೆಯ ಅಗತ್ಯವಿರುತ್ತದೆ ಮತ್ತು ಕಡಿಮೆ ವೆಚ್ಚದಲ್ಲಿ ಬೆಳೆಸಲಾಗುತ್ತದೆ ಎಂದು ಅವರು ಕೃಷಿ ಸಚಿವರ ಗಮನಸೆಳೆದರು.

ಹುಣಸೆ ಹಣ್ಣನ್ನು ದೇಶಾದ್ಯಂತ ವ್ಯಾಪಕವಾಗಿ ಬೆಳೆಯಲಾಗುತ್ತದೆ, ಮಧ್ಯ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ, ಆದರೆ ಹಲಸು ಮತ್ತು ನೇರಳೆಗಳನ್ನು ಪ್ರಧಾನವಾಗಿ ಭಾರತದ ದಕ್ಷಿಣ, ಮಧ್ಯ, ಪೂರ್ವ ಮತ್ತು ಪೂರ್ವ ರಾಜ್ಯಗಳಲ್ಲಿ ಬೆಳೆಯಲಾಗುತ್ತದೆ. ಭಾರತವು ಈ ಹಣ್ಣುಗಳ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿದೆ. ಏಷ್ಯಾದ ಕೆಲ ದೇಶಗಳು ಕಮತ್ತು ಆಫ್ರಿಕನ್ ದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಈ ಕೃಷಿ ಕಂಡುಬರುತ್ತದೆ ಎಂಬ ಅಂಶವನ್ನು ಮಾಜಿ ಪ್ರಧಾನಿಗಳು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

- Advertisement -spot_img

More articles

- Advertisement -spot_img

Latest article