ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?: ಸಿದ್ದರಾಮಯ್ಯ ಪ್ರಶ್ನೆ

Date:

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?: ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ ಎಂದರು. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು ಅವರು ಹೇಳಿದರು.

ಫೆಬ್ರವರಿ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ ?ಎಂದರು. ಗೃಹಲಕ್ಷ್ಮಿ ಹಣವನ್ನು ಲಪಟಾಯಿಸಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ ಎಂದರು.

ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ ಹಣ ಇನ್ನು ಬಿಡುಗಡೆಯಾಗಿಲ್ಲ ಎಂದರು. ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಅದು ಒಪ್ಪಬೇಕಾದ ವಿಚಾರ. ಯಾರು ಪಕ್ಷಕ್ಕಿಂತ ದೊಡ್ಡವರಾದರೂ ಸಾಧ್ಯವೇ ಇಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ ದರ?

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ...

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು:...

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...