ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಬುಧವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಟ್ಟು 9 ಮಂದಿ ಸಜೀವ ದಹನವಾಗಿದ್ದಾರೆ.
ಬೆಂಗಳೂರುದಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಡಿವೈಡರ್ ದಾಟಿ ಬಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಹಿರಿಯೂರಿನ ಜವನಗೊಂಡನಹಳ್ಳಿ ಗೊರ್ಲತ್ತು ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.
ಡಿಕ್ಕಿಯ ರಭಸಕ್ಕೆ ಬಸ್ ಹಾಗೂ ಲಾರಿ ಎರಡೂ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿವೆ. ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅದರಲ್ಲಿದ್ದ 8 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಲಾರಿ ಚಾಲಕನೂ ಸಜೀವ ದಹನಗೊಂಡಿದ್ದಾನೆ.
ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 32 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ತಿಳಿದ ತಕ್ಷಣ ಹಿರಿಯೂರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.
ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ