ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

Date:

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಬೆಂಗಳೂರು: ಇತ್ತೀಚೆಗೆ ರಸ್ತೆಯಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವ ಘಟನೆಗಳು ಹೆಚ್ಚುತ್ತಿರುವ ನಡುವೆಯೇ, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೈಕೋ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್‌ಗಳ ಖಾಸಗಿ ವೀಡಿಯೋ ಹಾಗೂ ಫೋಟೋಗಳನ್ನು ಸೆರೆಹಿಡಿಯುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ನಾಗರಬಾವಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಸುವೆಂದು ಮೊಹಂತ ಎಂಬಾತ, ಮಹಿಳಾ ನರ್ಸ್‌ಗಳು ಬಟ್ಟೆ ಬದಲಿಸುವ ಸಂದರ್ಭಗಳಲ್ಲಿ ಅವರ ಖಾಸಗಿ ಫೋಟೋ ಮತ್ತು ವೀಡಿಯೋಗಳನ್ನು ಚಿತ್ರೀಕರಿಸುತ್ತಿದ್ದಾನೆ ಎನ್ನಲಾಗಿದೆ. ಈ ಕೃತ್ಯವನ್ನು ಗಮನಿಸಿದ ನರ್ಸ್‌ವೊಬ್ಬರು ತಕ್ಷಣವೇ ವಿಷಯವನ್ನು ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದಾರೆ.

ವಿಷಯ ತಿಳಿದ ಕೂಡಲೆ ಆಸ್ಪತ್ರೆಯ ವೈದ್ಯ ಡಾ. ಚೇತನ್ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಪೊಲೀಸ್ ತನಿಖೆಯ ವೇಳೆ ಆರೋಪಿ ಸುವೆಂದು ಮೊಹಂತ ಕಳೆದ ಒಂದು ವರ್ಷದಿಂದ ಅದೇ ಖಾಸಗಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದನು ಎಂಬುದು ತಿಳಿದುಬಂದಿದೆ. ಅಲ್ಲದೆ, ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ಮಹಿಳಾ ಸಹೋದ್ಯೋಗಿಗಳ ಅನೇಕ ಖಾಸಗಿ ಫೋಟೋ ಮತ್ತು ವೀಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಮುಂದುವರಿದಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...