ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ
ಚಾಮರಾಜನಗರ: ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದರು. ಮನೆಗೆ ಬಂದ ಕೆಲವೇ ಸಮಯದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಚಾಮರಾಜನಗರ ನಗರದ ಪೊಲೀಸ್ ಗೃಹದಲ್ಲಿ ವಾಸವಿದ್ದ ತಮ್ಮ ಮನೆಯಲ್ಲಿ ಈ ಘಟನೆ ಸಂಭವಿಸಿದೆ.
ಎಎಸ್ಐ ನಾಗನಾಯಕ ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.






